
ಬೆಂಗಳೂರು: ಭಾರತ – ಆಸ್ಟ್ರೇಲಿಯಾ ಟೆಸ್ಟ್ ಸರಣಿ ನಡುವೆ ಭಾರತೀಯ ವೇಗದ ಬೌಲರ್ ನಿವೃತ್ತಿ ಘೋಷಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ನಿವೃತ್ತಿ ಘೋಷಿಸಿದ್ದಾರೆ. ಭಾರತಕ್ಕಾಗಿ ಮತ್ತು ಕ್ರಿಕೆಟ್ ಆಡಿದ್ದ ಫಾಸ್ಟ್ ಬೌಲರ್ ಕಳೆದ ಐದು ವರ್ಷಗಳಿಂದ ಅವಕಾಶ ಸಿಗದ ಕಾರಣ ನಿವೃತ್ತಿ ಘೋಷಿಸಿದ್ದಾರೆ. ಈ ಆಟಗಾರ ಬೇರೆ ಯಾರೂ ಅಲ್ಲ, ವೇಗದ ಬೌಲರ್ ಸಿದ್ಧಾರ್ಥ್ ಕೌಲ್. ಸಿದ್ಧಾರ್ಥ್ ಕೌಲ್ ಕೊನೆಯ ಬಾರಿಗೆ 2019 ರಲ್ಲಿ ಭಾರತಕ್ಕಾಗಿ ಆಡಿದ್ದರು. ಅಂದಿನಿಂದ ಸಿದ್ಧಾರ್ಥ್ ಕೌಲ್ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವ ಪ್ರಯತ್ನದಲ್ಲಿದ್ದರು. ಆದರೆ ಅವಕಾಶ ವಂಚಿತರಾದರು. ಇದೀಗ ಸಿದ್ಧಾರ್ಥ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ನಿವೃತ್ತಿ ಘೋಷಿಸಿದ್ದಾರೆ. 2008ರಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ ಅಂಡರ್-19 ವಿಶ್ವಕಪ್ ಗೆದ್ದಿತ್ತು. ಆ ತಂಡದಲ್ಲಿ ಸಿದ್ಧಾರ್ಥ್ ಕೌಲ್ ಕೂಡ ಇದ್ದರು. ಸಿದ್ಧಾರ್ಥ್ 2018 ರಲ್ಲಿ ಐರ್ಲೆಂಡ್ ವಿರುದ್ಧ ತಮ್ಮ ಮೊದಲ ಅಂತಾರಾಷ್ಟ್ರೀಯ ಟಿ20 ಪಂದ್ಯವನ್ನು ಆಡಿದ್ದರು. ಈ ವರ್ಷ ಇಂಗ್ಲೆಂಡ್ ವಿರುದ್ಧ ಏಕದಿನ ಪಂದ್ಯಕ್ಕೆ ಪಾದಾರ್ಪಣೆ ಮಾಡಿದರು. ಟಿ20 ಕ್ರಿಕೆಟ್ನಲ್ಲಿ 4 ವಿಕೆಟ್ಗಳನ್ನು ಕಬಳಿಸಿದ್ದಾರೆ. ಏಕದಿನದಲ್ಲಿ ಒಂದೇ ಒಂದು ವಿಕೆಟ್ ಪಡೆಯಲು ಸಾಧ್ಯವಾಗಲಿಲ್ಲ. ಸಿದ್ಧಾರ್ಥ್ ಕೌಲ್ ಐಪಿಎಲ್ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್, ಡೆಲ್ಲಿ ಡೇರ್ಡೆವಿಲ್ಸ್, ಸನ್ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಿದ್ದರು. ಅವರು ಐಪಿಎಲ್ನಲ್ಲಿ 55 ಪಂದ್ಯಗಳನ್ನು ಆಡಿದ್ದಾರೆ ಮತ್ತು 58 ವಿಕೆಟ್ಗಳನ್ನು ಪಡೆದಿದ್ದಾರೆ. 2022ರಲ್ಲಿ ಕೊನೆಯ ಐಪಿಎಲ್ ಪಂದ್ಯ ಆಡಿದ್ದರು. ಸಿದ್ಧಾರ್ಥ್ ಕೌಲ್ ತಮ್ಮ ಕ್ರಿಕೆಟ್ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ.