
ಬೆಂಗಳೂರು: ರಾಜ್ಯದ ಪ್ರಮುಖ ಜಲಾಶಯಗಳಾದ ಕೆಆರ್ಎಸ್, ಆಲಮಟ್ಟಿ ಹಾಗೂ ಬಸವಸಾಗರ ಜಲಾಶಯಗಳ ಇಂದಿನ ನೀರಿನ ಮಟ್ಟ, ಒಳಹರಿವು ಮತ್ತು ಹೊರಹರಿವಿನ ವಿವರ ಲಭ್ಯವಾಗಿದೆ.
ಮಂಡ್ಯ ಜಿಲ್ಲೆಯ ಕೆಆರ್ಎಸ್ ಜಲಾಶಯದ ಗರಿಷ್ಠ ಮಟ್ಟ 124.80 ಅಡಿಯಾಗಿದ್ದು, ಇಂದು 105.56 ಅಡಿ ನೀರಿದೆ. ಒಟ್ಟು 27.491 ಟಿಎಂಸಿ ನೀರು ಸಂಗ್ರಹವಾಗಿದ್ದು, 1,907 ಕ್ಯೂಸೆಕ್ ಒಳಹರಿವು ಹಾಗೂ 3,647 ಕ್ಯೂಸೆಕ್ ಹೊರಹರಿವು ದಾಖಲಾಗಿದೆ.
ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯದ ಗರಿಷ್ಠ ಮಟ್ಟ 519.60 ಮೀಟರ್ ಆಗಿದ್ದು, ಪ್ರಸ್ತುತ 518.87 ಮೀಟರ್ ನೀರಿದೆ. ಜಲಾಶಯಕ್ಕೆ ಒಳಹರಿವು ಇಲ್ಲದಿದ್ದು, 13,623 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.
ಯಾದಗಿರಿ ಜಿಲ್ಲೆಯ ಬಸವಸಾಗರ ಜಲಾಶಯದಲ್ಲಿ ಗರಿಷ್ಠ 492.25 ಮೀಟರ್ ಮಟ್ಟದ ಪೈಕಿ ಇಂದು 490.74 ಮೀಟರ್ ನೀರಿದೆ. 10,378 ಕ್ಯೂಸೆಕ್ ಒಳಹರಿವು ಹಾಗೂ 10,830 ಕ್ಯೂಸೆಕ್ ಹೊರಹರಿವು ದಾಖಲಾಗಿದೆ.




