
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಇದೇ ಡಿಸೆಂಬರ್ 11ರಿಂದ 14ರವರೆಗೆ ಅದ್ದೂರಿಯಾಗಿ ನಡೆಯಲಿರುವ ದತ್ತ ಜಯಂತಿಗೆ ಇಂದು ಅಧಿಕೃತ ಚಾಲನೆ ದೊರಕಿದೆ. ನಗರದ ಕಾಮಧೇನು ಗಣಪತಿ ದೇವಾಲಯದಲ್ಲಿ ಮಾಜಿ ಸಚಿವ ಸಿ.ಟಿ.ರವಿ ಹಾಗೂ ಭಜರಂಗದಳ ಮುಖಂಡ ರಘು ಸಖಲೇಶಪುರ ಸೇರಿದಂತೆ ನೂರಾರು ದತ್ತಭಕ್ತರು ಮಾಲಾಧಾರಣೆ ಮಾಡಿದ್ದಾರೆ. ಇಂದಿನಿಂದ 9ದಿನಗಳ ಕಾಲ ಮಾಲಾಧಾರಿಗಳು ವೃತದಲ್ಲಿರುತ್ತಾರೆ. ಡಿಸೆಂಬರ್ 12ರಂದು ಅನುಸೂಯ ಜಯಂತಿ, 13ರಂದು ಭಕ್ತರು ಹಾಗೂ ಸಾರ್ವಜನಿಕರಿಂದ ಬೃಹತ್ ಶೋಭಾಯಾತ್ರೆ ನಡೆಯುತ್ತದೆ. 14ರಂದು ದತ್ತ ಪಾದುಕೆ ದರ್ಶನವಿರುತ್ತದೆ. ರಾಜ್ಯದ ಮೂಲೆಮೂಲೆಯಿಂದ ಸಾವಿರಾರು ಭಕ್ತರು ಆಗಮಿಸಿ ಪಾದುಕೆ ದರ್ಶನ ಪಡೆಯುತ್ತಾರೆ. ಉತ್ಸವದ ಸಮಯದಲ್ಲಿ ಇಡೀ ಕಾಫಿನಾಡು ಕೇಸರಿಮಯವಾಗಿ ಕಂಗೊಳಿಸುತ್ತಿರುತ್ತದೆ.