
ಚಿಕ್ಕಮಗಳೂರು: ದತ್ತಜಯಂತಿ ಕಾರ್ಯಕ್ರಮದ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಬಂಧ ಜಿಲ್ಲೆಯ ಪೋಲೀಸ್ ವರಿಷ್ಠಾಧಿಕಾರಿಗಳ ಕಛೇರಿಯಲ್ಲಿ ಹೆಚ್ಚುವರಿ ಪೋಲೀಸ್ ಮಹಾನಿರ್ದೇಶಕರಾದ (ಕಾನೂನು ಮತ್ತು ಸುವ್ಯವಸ್ಥೆ) ಆರ್. ಹಿತೇಂದ್ರರವರು ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸೂಕ್ತ ಸಲಹೆ ಮತ್ತು ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಕಾರ್ಯಕ್ರಮದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು. ಸಭೆಯಲ್ಲಿ ಅಮಿತ್ ಸಿಂಗ್ IPS,ಪೊಲೀಸ್ ಉಪ ಮಹಾ ನಿರೀಕ್ಷಕರು, ಪಶ್ಚಿಮ ವಲಯ,ಡಾ. ವಿಕ್ರಮ ಅಮಟೆ, , ಪೊಲೀಸ್ ಅಧೀಕ್ಷಕರು ಚಿಕ್ಕಮಗಳೂರು ಜಿಲ್ಲೆ, ಶ್ರೀ. ಕೃಷ್ಣಮೂರ್ತಿ ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಚಿಕ್ಕಮಗಳೂರು ಜಿಲ್ಲೆ ಮತ್ತು ಜಿಲ್ಲೆಯ ಇತರೇ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.