ಉತ್ತರ ಕನ್ನಡ: ಜಿಲ್ಲೆಯ ಕಾರವಾರದಲ್ಲಿ ನಡೆಯುತ್ತಿರುವ ಕರಾವಳಿ ಉತ್ಸವದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳೂರು, ಉಡುಪಿ ಮತ್ತು ಕರಾವಳಿ ತೀರವನ್ನು ಪ್ರವಾಸೋದ್ಯಮದ ಹಬ್ ಆಗಿ ಪರಿವರ್ತಿಸಲು ಸರ್ಕಾರ ಹೊಸ ಟೂರಿಸಂ ಪಾಲಿಸಿ ಜಾರಿಗೆ ತರಲಿದೆ ಎಂದರು. ಬಹುಕಾಲದ ಬೇಡಿಕೆಯಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ, ಶರಾವತಿ ಯೋಜನೆ ಮತ್ತು ವರದಾ ಹಾಗೂ ಬೇಡ್ತಿ ನದಿ ಜೋಡಣೆಗೆ ಡಿಪಿಆರ್ ಘೋಷಣೆ ಮಾಡಿ ಹೊಸ ಭರವಸೆ ನೀಡಿದರು.
