ಧರ್ಮಸ್ಥಳ: ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಅದ್ದೂರಿಯಾಗಿ ನಡೆಯುತ್ತಿದ್ದೂ, ಕಾರ್ತಿಕ ಮಾಸದ ಈ ಹಬ್ಬದ ಸಂದರ್ಭದಲ್ಲಿ ಇಡೀ ಧರ್ಮಸ್ಥಳ ಕ್ಷೇತ್ರವೇ ಲಕ್ಷಕ್ಕೂ ಅಧಿಕ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ. ನೇತ್ರಾವತಿ ಸ್ನಾನ ಘಟ್ಟದಿಂದ ಕ್ಷೇತ್ರದವರೆಗೆ ಬಣ್ಣ ಬಣ್ಣದ ವಿದ್ಯುತ್ ದೀಪವನ್ನು ಅಳವಡಿಸಿದ್ದು, ಭಕ್ತರನ್ನು ಸ್ವಾಗತಿಸಲು ಕ್ಷೇತ್ರವು ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಪ್ರತಿದಿನವೂ ಕೂಡ ಸ್ವಾಮಿಯ ಉತ್ಸವಗಳು ನಡೆಯುತ್ತಿದ್ದೂ, ಕೆರೆಕಟ್ಟೆ ಉತ್ಸವ, ಲಲಿತೋದ್ಯಾನ ಉತ್ಸವ, ಕಂಚಿಮಾರು ಕಟ್ಟೆ ಉತ್ಸವ ನಡೆದಿದೆ. ಸಂಜೆ ವೇಳೆ ಅಮೃತವರ್ಷಿಣಿ ಸಭಾಂಗಣದಲ್ಲಿ ವಿವಿಧ ಕಲಾವಿದರಿಂದ ಸಂಗೀತ ಮತ್ತು ನೃತ್ಯ ಕಾರ್ಯಕ್ರಮಗಳು ಭಕ್ತರಿಗೆ ರಸದೌತಣ ನೀಡುತ್ತಿದೆ.
