
ಉಡುಪಿ: ಉಡುಪಿಯಲ್ಲಿ ಈ ಹಿಂದೆ ಸತ್ಯವತಿ ಅವರು ಉಸ್ತುವಾರಿ ಕಾರ್ಯದರ್ಶಿಯಾಗಿದ್ದು, ಅವರು ಇತ್ತೀಚೆಗೆ ನಿವೃತ್ತಿ ಹೊಂದಿರುವುದರಿಂದ ಹುದ್ದೆ ತೆರವಾಗಿತ್ತು. ಉಸ್ತುವಾರಿ ಕಾರ್ಯದರ್ಶಿಗಳು ಆಗಿಂದಾಗಲೆ ಜಿಲ್ಲೆಗೆ ಬೇಟಿ ನೀಡಿ ಸಭೆ ನಡೆಸುತ್ತಿರುತ್ತಾರೆ. ಈಗ ಸರ್ಕಾರವು ಉಡುಪಿ ಜಿಲ್ಲೆಗೆ ಕಾರ್ಮಿಕ ಇಲಾಖೆಯ ಕಾರ್ಯದರ್ಶಿಯಾದ ರೋಹಿಣಿ ಸಿಂಧೂರಿ ಅವರನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ನೇಮಿಸಿ ಆದೇಶ ಹೊರಡಿಸಿದೆ.
ರಾಜ್ಯದ ಅಭಿವೃದ್ಧಿ ಯೋಜನೆಗಳ ಜಾರಿ, ಪರಿಶೀಲನೆ ಮತ್ತು ಅಹವಾಲು ವಿಚಾರಣೆ, ಅನಿರೀಕ್ಷಿತ ತಪಾಸಣೆ ಕುರಿತು ಜಿಲ್ಲಾ ಮಟ್ಟದಲ್ಲಿ ಪರಿಶೀಲಿಸಿ ಸರಕಾರಕ್ಕೆ ವರದಿ ಸಲ್ಲಿಸಲು ಎಲ್ಲಾ ಜಿಲ್ಲೆಗಳಿಗೂ ಉಸ್ತುವಾರಿ ಕಾರ್ಯದರ್ಶಿಗಳ ನೇಮಕಾತಿ ಸರಕಾರ ಮಾಡಲಿದೆ.