ಬೆಂಗಳೂರು: ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಗಳು ಸಂಚರಿಸುತ್ತಿದ್ದ ಕಾರನ್ನು ದುಷ್ಕಮಿ ಅಡ್ಡಗಟ್ಟಿ ದಾಳಿ ನಡೆಸಿರುವ ಘಟನೆ ಮೊನ್ನೆ ಭಾನುವಾರ ನಡೆದಿದ್ದು, ಈ ಕುರಿತು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷರಾದ ವೇದಮೂರ್ತಿ ಡಾ. ಬಿ.ಎಸ್ ರಾಘವೇಂದ್ರ ಭಟ್ ಖಂಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು ಇದೊಂದು ಪೂರ್ವ ನಿಯೋಜಿತ ದಾಳಿಯಾಗಿದ್ದು, ಇದನ್ನು ಈಗಾಗಲೇ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಖಂಡಿಸಿದ್ದು, ಅಧ್ಯಕ್ಷರಾದ ಅಶೋಕ ಹಾರನಹಳ್ಳಿಯವರು ಕೇರಳ ಸರ್ಕಾರಕ್ಕೆ ಸರಿಯಾದ ತನಿಖೆ ಮಾಡಬೇಕೆಂದು ಪತ್ರ ಬರೆದಿದ್ದಾರೆ. ಹಿಂದೂ ಧರ್ಮಕ್ಕೆ ತ್ರಿಮತಸ್ಥ ಯತಿಗಳ ಕೊಡುಗೆ ಅಪಾರವಾದದ್ದು, ಹಾಗಾಗಿ ನೇರವಾಗಿ ಮಠಾಧಿಪತಿಗಳ ಮೇಲೆಯೇ ದಾಳಿ ನಡೆಸುತ್ತಿದ್ದಾರೆ, ಇದು ಹಿಂದೂ ಧರ್ಮದ ಮೇಲೆ ಮಾಡುತ್ತಿರುವ ದಾಳಿಯಾಗಿದೆ. ಮುಂದೆ ಈ ರೀತಿ ಘಟನೆಗಳು ನಡೆಯದಂತೆ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು, ಮಠಾಧೀಶರಿಗೆ ರಕ್ಷಣೆ ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.