ಚಿಕ್ಕಮಗಳೂರು: ಮಲೆನಾಡಿನಲ್ಲಿ ಕಾಡುಪ್ರಾಣಿಗಳ ಹಾವಳಿ ಮತ್ತೆ ಮುಂದುವರೆದಿದ್ದು, ಕಾಫಿನಾಡು ಚಿಕ್ಕಮಗಳೂರಿನ ಕೆಲವು ಪ್ರದೇಶಗಳಲ್ಲಿ ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಜಿಲ್ಲೆಯ ತುಡುಕೂರು ಗ್ರಾಮದ ಕಾಫಿ ತೋಟದಲ್ಲಿ ಬೀಡುಬಿಟ್ಟಿರುವ ೨೪ ಕಾಡಾನೆಗಳ ಹಿಂಡು ಹಳೆ ಆಲ್ದೂರು, ಮಡೆನೆರಲು ಸುತ್ತಮುತ್ತ ಸಂಚಾರ ಮಾಡುತ್ತಿವೆ. ಸದ್ಯ ಸ್ಥಳಕ್ಕೆ ಇಟಿಎಫ್ ಸಿಬ್ಬಂದಿ, ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ, ಮುನ್ನೆಚ್ಚರಿಕಾ ಕ್ರಮವಾಗಿ ಈ ಪ್ರದೇಶಗಳ ರೈತರು ಹಾಗೂ ಕಾರ್ಮಿಕರು ಕಾಫಿತೋಟ, ಗದ್ದೆ ಕೆಲಸಕ್ಕೆ ತೆರಳದಂತೆ ಸೂಚನೆ ನೀಡಿದ್ದಾರೆ. ಮಲೆನಾಡಿನಲ್ಲಿ ಕಾಡುಪ್ರಾಣಿಗಳ ಉಪಟಳ ಮಿತಿಮೀರಿದ್ದು, ಇದಕ್ಕೆ ಕಡಿವಾಣ ಹಾಕಬೇಕಾದ ಅಗತ್ಯವಿದೆ.