
ಕೊಡಗು: ಸುಂಟಿಕೊಪ್ಪ ವಲಯ ಕಾನ್ಬೈಲ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ)ಬಿ ಸಿ ಟ್ರಸ್ಟ ವತಿಯಿಂದ ನಡೆದ ಪರಿಸರ ದಿನಾಚರಣೆಯ ಕಾರ್ಯಕ್ರಮವನ್ನು ಕಾನ್ಬೈಲ್ ಪಂಚಾಯಿತಿಯ ಅಧ್ಯಕ್ಷರಾದ ಶ್ರೀಯುತ ಜಗನ್ನಾಥ್ರವರು ಗಿಡ ನೆಡುವುದರ ಮೂಲಕ ಉದ್ಘಾಟಿಸಿದರು. ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಶಾಂತಿ ಪರಿಸರದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಮಡಿಕೇರಿ ತಾಲ್ಲೂಕು ಯೋಜನಾಧಿಕಾರಿಯಾದ ಶ್ರೀಯುತ ಪುರುಷೋತ್ತಮ್ ಪರಿಸರದ ಪ್ರಾಮುಖ್ಯತೆ ಮತ್ತು ಹಣ್ಣಿನ ಗಿಡಗಳನ್ನು ಅರಣ್ಯಗಳಲ್ಲಿ ನಾಟಿ ಮಾಡುವುದರ ಮೂಲಕ ಪ್ರಾಣಿ ಪಕ್ಷಿಗಳಿಗೆ ಆಹಾರ ಸಿಗುವಂತೆ ಮಾಡಬೇಕು ಎಂದರು. ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಶ್ರೀಯುತ ಮೂರ್ತಿರವರು ಕೊಡಗಿನ ಪರಿಸರ ಚೆನ್ನಾಗಿದೆ ಇದನ್ನು ನಶಿಸಿ ಹೋಗದಂತೆ ಕಾಪಾಡಿಕೊಂಡು ಬರಬೇಕೆಂದು ತಿಳಿಸಿದರು. ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ಸತೀಶ್, ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಭವ್ಯ, ಶಾಲಾ ಶಿಕ್ಷಕಿ ಶ್ರೀಮತಿ ಕವಿತಾರವರು ಧನ್ಯವಾದ ಗೈದರು. ಸಂತೋಷ್ರವರು ಕಾರ್ಯಕ್ರಮ ನಿರೂಪಿಸದರು. ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಪರಿಸರದ ಬಗ್ಗೆ ಪ್ರಭಂದ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು ಅದರಲ್ಲಿ ಉತ್ತಮ ಪ್ರಬಂಧ ಬರೆದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಣೆ ಮಾಡಲಾಯಿತು. ಸೇವಾ ಪ್ರತಿನಿಧಿ ಶ್ರೀಮತಿ ಯಶೋಧ ಎಸ್. ಬಿ ರವರು ಸಹ ಪ್ರಕೃತಿ ಬಗ್ಗೆ ಲೇಖನವನ್ನು ಬರೆದಿದ್ದರು.