
ಶೃಂಗೇರಿ: ಜಯಭಾರತಿ ವಿದ್ಯಾಲಯದಲ್ಲಿ ಪ್ರಿ-ಕೆ.ಜಿ.ಯಿಂದ 4ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗಾಗಿ ಛದ್ಮವೇಷ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಡಾ. ಹೆಚ್.ಜಿ. ಲಕ್ಷ್ಮೀನಾರಾಯಣ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶೃಂಗೇರಿಯ ಶ್ರೀ ಶಾರದಾ ಶಿಶು ಕೇಂದ್ರದ ಪ್ರಾಂಶುಪಾಲರಾದ ಶ್ರೀಮತಿ ಲಕ್ಷ್ಮಿ ವಿಘ್ನೇಶ್ ಆಗಮಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ವಿನಯ್ ಸಿ.ಜಿ. ಉಪಸ್ಥಿತರಿದ್ದರು. ನಿವೃತ್ತ ಶಿಕ್ಷಕರಾದ ಭಾಸ್ಕರ್, ನಿವೃತ್ತ ಶಿಕ್ಷಕಿಯರಾದ ಭಾಗ್ಯಶ್ರೀ ಹಾಗೂ ಕೊಪ್ಪದ ಶ್ರೀಮತಿ ಮಂಗಳ ಪ್ರವೀಣ್ ಅವರು ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು. ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ವಿವಿಧ ಆಕರ್ಷಕ ವೇಷಭೂಷಣಗಳನ್ನು ಧರಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವ ಮೂಲಕ ನೆರೆದ ಪ್ರೇಕ್ಷಕರನ್ನು ರಂಜಿಸಿದರು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲೆಯ ವತಿಯಿಂದ ಪ್ರೋತ್ಸಾಹಕರ ಬಹುಮಾನ ನೀಡಲಾಗಿದ್ದು, ವಿಜೇತರಿಗೆ ವಿಶೇಷ ಬಹುಮಾನ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ರಂಜಿತ ಸ್ವಾಗತಿಸಿ, ಸಾವರ್ಣಿ ಹಾಗೂ ಪುಣ್ಯ ನಿರೂಪಿಸಿದರು. ಅನಘ ವಂದಿಸಿದರು.





