ಬಾಳೆಹೊನ್ನೂರು: ಕಸ್ತೂರಿ ರಂಗನ್ ವರದಿ ಕುರಿತು ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅವರೊಂದಿಗೆ ನಡೆದ ಸಂವಾದ ಸಭೆಯಲ್ಲಿ ಭಾರತೀಯ ಜನತಾ ಪಾರ್ಟಿಯ ನಾಯಕರನ್ನು ಕಡೆಗಣಿಸಲಾಗಿದೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ವೆನಿಲ್ಲ ಭಾಸ್ಕರ್ ಆರೋಪಿಸಿದ್ದಾರೆ. ಕಸ್ತೂರಿ ರಂಗನ್ ವರದಿ ವಿರೋಧಿಸಿ ಪಟ್ಟಣದಲ್ಲಿ ನಡೆದ ಹೋರಾಟದಲ್ಲಿ ಬಿಜೆಪಿಯ ಸಾವಿರಾರು ಕಾರ್ಯಕರ್ತರು ಪಕ್ಷಬೇಧ ಮರೆತು ಭಾಗವಹಿಸಿದ್ದರು. ಬೆಳಿಗ್ಗೆ ತೀರ್ಥಹಳ್ಳಿಯಲ್ಲಿ ನಡೆದ ಮುಖ್ಯಮಂತ್ರಿ ಸಭೆಯಲ್ಲಿ ಬಿಜೆಪಿಯ ಮಾಜಿ ಶಾಸಕರನ್ನು ವೇದಿಕೆಯ ಮೇಲೆ ಕೂರಿಸಿ, ಭಾಷಣ ಮಾಡಲು ಅವಕಾಶ ನೀಡಿದ್ದರು. ಆದರೆ ಶೃಂಗೇರಿ ಕ್ಷೇತ್ರದ ಮಾಜಿ ಶಾಸಕ ಡಿ ಎನ್ ಜೀವರಾಜ್ ಅವರನ್ನು ಸೌಜನ್ಯಕ್ಕಾದರೂ ಮಾತನಾಡಲು ಅವಕಾಶ ನೀಡಲ್ಲ ಮನವಿ ಪತ್ರ ಕೊಡಲು ಅವಕಾಶ ಕೊಡಲಿಲ್ಲ. ಸರ್ವ ಪಕ್ಷದ ಸಭೆ ಎಂದು ಕರೆದು ಈ ರೀತಿ ಅವಮಾನ ಮಾಡಿರುವುದು ಎಷ್ಟ್ಟು ಸರಿ ಎಂದು ಪ್ರಶ್ನಿಸಿದ್ದಾರೆ.
