
ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮಾದಕ ವಸ್ತುಗಳ ನಿಯಂತ್ರಣಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದು, ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಚಿಕ್ಕಮಗಳೂರು ತಾಲ್ಲೂಕಿನ ಕೊಂಬುಗತ್ತಿ ಗ್ರಾಮದಲ್ಲಿ ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 1.26 ಕೆ.ಜಿ ಗಾಂಜಾ ವಶಪಡಿಸಿಕೊಂಡು ವಿಚಾರಣೆಯನ್ನು ಮುಂದುವರೆಸಿದ್ದಾರೆ. ಮಾದಕ ವಸ್ತುಗಳ ಬಳಕೆ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಂಡರೂ ಸಹ ಇತ್ತೀಚಿನ ದಿನಗಳಲ್ಲಿ ಅದರ ಬಳಕೆಗೆ ಕಡಿವಾಣ ಬಿದ್ದಿಲ್ಲ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಪೊಲೀಸರು ಹಲವಾರು ಕ್ರಮಗಳನ್ನು ಕೈಗೊಂಡು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಪಿ.ಐಸ್.ಐ ರಘುನಾಥ ಎಸ್. ವಿ ಮತ್ತು ಪೊಲೀಸ್ ಸಿಬ್ಬಂದಿಗಳಾದ ಇಮ್ರಾನ್ ಖಾನ್, ಹರೀಶ ಟಿ. ಕೆ, ಧರ್ಮರಾಜ, ಹರಿಪ್ರಸಾದ, ರಮೇಶ ಎನ್. ಆರ್ ಮತ್ತು ಮಹಾದೇವಸ್ವಾಮಿ ಇದ್ದರು.