
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವದಿಂದ ಅಡುಗೆ ಸಿಬ್ಬಂದಿ ಸಂಕಷ್ಟ ಅನುಭವಿಸುತ್ತಿರುವ ಘಟನೆ ನಡೆದಿದೆ. ಇಸ್ರೇಲ್–ಇರಾನ್ ನಡುವಿನ ಸಂಘರ್ಷದ ಪರಿಣಾಮ ಗ್ಯಾಸ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿ ಕಳೆದ ಐದು ದಿನಗಳಿಂದ ಶಾಲೆಗೆ ಗ್ಯಾಸ್ ಸಿಲಿಂಡರ್ ಲಭ್ಯವಾಗಿಲ್ಲ ಎಂದು ತಿಳಿದುಬಂದಿದೆ. ಇದರ ಪರಿಣಾಮವಾಗಿ ಅಡುಗೆ ಸಿಬ್ಬಂದಿ ಬಯಲು ಪ್ರದೇಶದಲ್ಲಿ ಸೌದೆ ಒಲೆ ಹಾಕಿ ಮಧ್ಯಾಹ್ನದ ಊಟವನ್ನು ತಯಾರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಶಾಲೆಯಲ್ಲಿ ಸುಮಾರು 60ರಿಂದ 70 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ಅವರಿಗೆ ಊಟ ತಯಾರಿಸಲು ಸಿಬ್ಬಂದಿ ಸಾಕಷ್ಟು ಕಷ್ಟಪಡುತ್ತಿದ್ದಾರೆ. ಪರೀಕ್ಷಾ ಸಮಯವಾಗಿರುವುದರಿಂದ ಶಿಕ್ಷಕರು ವಿದ್ಯಾರ್ಥಿಗಳಿಗೆ ಪಾಠಗಳ ಪುನರಾವಲೋಕನ ಮಾಡಿಸುತ್ತಿರುವ ನಡುವೆ ಅಡುಗೆ ವ್ಯವಸ್ಥೆಯ ಸಮಸ್ಯೆಯೂ ಎದುರಾಗಿದೆ. ಜಿಲ್ಲಾಧಿಕಾರಿಗಳ ಸೂಚನೆ ಇದ್ದರೂ ಗ್ಯಾಸ್ ಏಜೆನ್ಸಿಯ ನಿರ್ಲಕ್ಷ್ಯದಿಂದ ಈ ಸಮಸ್ಯೆ ಉಂಟಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದು, ಶಾಲೆಗೆ ತಕ್ಷಣ ಗ್ಯಾಸ್ ಸೌಲಭ್ಯ ಒದಗಿಸುವಂತೆ ಶಾಲಾ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಸಂಬಂಧಪಟ್ಟ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.
ವಿಡಿಯೋ ನೋಡಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:




