
ದೆಹಲಿ: ಬ್ಯಾಂಕ್ ಆಫ್ ಬರೋಡವು (BOB Recruitment 2026) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದ್ದು, ಒಟ್ಟು 104 ಹುದ್ದೆಗಳು ಲಭ್ಯವಿವೆ. ಎವಿಪಿ-II (ಗ್ರೂಪ್ ಹೆಡ್) 4, ಎವಿಪಿ-II (ಟೆರಿಟರಿ ಹೆಡ್) 17, ಡೆಪ್ಯುಟಿ ಮ್ಯಾನೇಜರ್ 70 ಹಾಗೂ ಡೆಪ್ಯುಟಿ ಮ್ಯಾನೇಜರ್ (ವೆಲ್ತ್ ಸ್ಟ್ರಾಟಜಿಸ್ಟ್) 13 ಹುದ್ದೆಗಳು ಸೇರಿವೆ. ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದ್ದು, 3ರಿಂದ 10 ವರ್ಷಗಳ ಕಾರ್ಯಾನುಭವ ಕಡ್ಡಾಯವಾಗಿದೆ. ಉದ್ಯೋಗ ಸ್ಥಳ ದೇಶಾದ್ಯಂತ ಇರಲಿದೆ. ಹುದ್ದೆಗಳ ಪ್ರಕಾರ ವಯೋಮಿತಿ 24ರಿಂದ 45 ವರ್ಷಗಳವರೆಗೆ ನಿಗದಿಯಾಗಿದ್ದು, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10ರಿಂದ 15 ವರ್ಷಗಳವರೆಗೆ ಸಡಿಲಿಕೆ ನೀಡಲಾಗಿದೆ.
ಅರ್ಜಿ ಶುಲ್ಕವಾಗಿ ಎಸ್ಸಿ/ಎಸ್ಟಿ/ಪಿಡಬ್ಲ್ಯುಡಿ/ಮಹಿಳಾ ಅಭ್ಯರ್ಥಿಗಳು ₹175 ಹಾಗೂ ಸಾಮಾನ್ಯ/ಇಡಬ್ಲ್ಯುಎಸ್/ಒಬಿಸಿ ಅಭ್ಯರ್ಥಿಗಳು ₹850 ಆನ್ಲೈನ್ ಮೂಲಕ ಪಾವತಿಸಬೇಕು. ಅಭ್ಯರ್ಥಿಗಳ ಆಯ್ಕೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನಡೆಯಲಿದ್ದು, ಕರ್ನಾಟಕದಲ್ಲಿ ಬೆಂಗಳೂರಿನಲ್ಲಿ ಪರೀಕ್ಷಾ ಕೇಂದ್ರವಿದೆ ಎಂದು ತಿಳಿಸಲಾಗಿದೆ.
ಆಸಕ್ತರು ಏಪ್ರಿಲ್ 16ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಮೊದಲು ನೋಂದಣಿ ಮಾಡಿ, ಲಾಗಿನ್ ಆಗಿ ಅಪ್ಲಿಕೇಶನ್ ಫಾರಂ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಶುಲ್ಕ ಪಾವತಿಸಿ, ಸಲ್ಲಿಸುವ ಮೊದಲು ಎಲ್ಲಾ ವಿವರಗಳನ್ನು ಪರಿಶೀಲಿಸಿ. ಭವಿಷ್ಯದ ಅಗತ್ಯಕ್ಕಾಗಿ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡಿರಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಬ್ಯಾಂಕ್ ಆಫ್ ಬರೋಡದ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ
https://bankappsweb.bankofbaroda.bank.in/BOBRECRUITMENT_MAR_WMS26/
ಹೆಚ್ಚಿನ ಮಾಹಿತಿಗಾಗಿ ಬ್ಯಾಂಕ್ ಆಫ್ ಬರೋಡದ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ







