
ಹೊಸನಗರ: ಶಾಸಕ ಗೋಪಾಲಕೃಷ್ಣ ಬೇಳೂರು ಗ್ರಾಮ ಸಭೆಗೆ ಅಧಿಕಾರಿಗಳು ಖದ್ದೂ ಹಾಜರಾಗುವಂತೆ ನೋಡಿಕೊಳ್ಳಬೇಕು. ಸಭೆಗೆ ಗೈರು ಹಾಜರಾದ ಅಧಿಕಾರಿಗಳ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಸೂಚಿಸಿದ್ದಾರೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಸಭೆ ಮಾಡಿದರೆ ಅಲ್ಲಿನ ಅವ್ಯವಸ್ಥೆ ಹಾಗೂ ಕುಂದುಕೊರತೆ ನಿರ್ವಹಿಸಲು ಸಾಧ್ಯವಾಗುತ್ತದೆ. ಗ್ರಾಮ ಸಭೆಯಲ್ಲಿ ಮಾತ್ರ ಗ್ರಾಮೀಣ ಪ್ರದೇಶದ ಸಮಸ್ಯೆ ಕೇಳಲು ಸಾಧ್ಯ. ಆ ಸಭೆಗೆ ಅಧಿಕಾರಿಗಳು ಹೋಗದಿದ್ದರೆ ಸಮಸ್ಯೆಗಳು ನಿವಾರಣೆಯಾಗುವುದು ಸಾಧ್ಯವಿಲ್ಲ ಎಂದರು. ಸಭೆಯು ಕಡ್ಡಾಯವಾಗಿ ನಡೆಯ ಬೇಕು. ಈ ವಿಚಾರದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳನ್ನು ಅಮಾನತು ಮಾಡಿ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನರೇಂದ್ರ ಕುಮಾರ್ಗೆ ತಿಳಿಸಿದರು.
ಹೊಸನಗರ ತಾಲ್ಲೂಕು ವ್ಯಾಪ್ತಿಯಲ್ಲಿ ವಿದ್ಯುತ್ ಸಮಸ್ಯೆ ಬಿಗಡಾಯಿಸಿದ್ದು. ಸಮಸ್ಯೆ ನಿವಾರಣೆಗೆ ಅಧಿಕಾರಿಗಳು ಗಮನ ನೀಡುತ್ತಿಲ್ಲವಾದರಿಂದ ಕೂಡಲೇ ಹೆಚ್ಚಿನ ನಿಗಾ ವಹಿಸುವಂತೆ ಸೂಚಿಸಿದರು. ಗ್ರಾಮ ಪಂಚಾಯಿತಿಯ ೧೫ನೇ ಹಣಕಾಸು ಯೋಜನೆಯ ಅನುದಾನ ತಡೆಹಿಡಿಯದೆ ಕೂಡಲೇ ಹಣ ಬಿಡುಗಡೆ ಮಾಡಬೇಕು ಎಂದಿದ್ದಾರೆ.
ರಿಪ್ಪನ್ಪೇಟೆ ಸಾರ್ವಜನಿಕ ಆಸ್ಪತ್ರೆಗೆ ಹೆಚ್ಚಿನ ವೈದ್ಯರ ಅವ್ಯಶ್ಯಕತೆ ಇದ್ದು. ಇರುವ ಒಬ್ಬ ವೈದ್ಯರಿಂದ ಆಸ್ಪತ್ರೆ ನೋಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಮತ್ತೊಬ್ಬ ವೈದ್ಯರನ್ನು ಆಯೋಜಿಸುವಂತೆ ಜಿಲ್ಲಾ ಆರೋಗ್ಯ ಅಧಿಕಾರಿಗಳ ಬಳಿ ದೂರವಾಣಿ ಮೂಲಕ ಚರ್ಚೆ ಮಾಡಿದ್ದಾರೆ. ಹಾಗೆಯೇ ಹೃದಯಾಘಾತದ ಬಗ್ಗೆ ಗ್ರಾಮೀಣ ಭಾಗದಲ್ಲಿ ವ್ಯಾಪಕ ಜನಜಾಗೃತಿ ಯಾಗಬೇಕು ಎಂದಿದ್ದಾರೆ.
ಪಟ್ಟಣ ಪಂಚಾಯಿತಿ ಅಧ್ಯಕ್ಷ ನಾಗರಾಜ ರೆಡ್ಡಿ, ತಾಲ್ಲೂಕು ಪಂಚಾಯಿತಿ ಇಒ ನರೇಂದ್ರ ಕುಮಾರ್, ತಾಲ್ಲೂಕು ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಚಿದಂಬರ ಹೂವಿನ ಕೋಣೆ, ತಾಲ್ಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.