ನವದೆಹಲಿ: ಆರ್ಥಿಕ ವಲಯದಲ್ಲಿ ಭಾರತ ಹೊಸ ಇತಿಹಾಸ ಬರೆಯುತ್ತಿದೆ. ವಿಶ್ವದ ಆರ್ಥಿಕತೆಯಲ್ಲಿ ಅತಿ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಭಾರತವು ಸದ್ಯದಲ್ಲೆ ಮೂರನೇ ಸ್ಥಾನಕ್ಕೇರಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ. 2014ರಲ್ಲಿ 10ನೇ ಸ್ಥಾನದಲ್ಲಿ ಇದ್ದ ಭಾರತ ಸದ್ಯದಲ್ಲೆ ಅತಿದೊಡ್ಡ ಆರ್ಥಿಕತೆಯಾಗಲಿದೆ. ಜನಸಂಖ್ಯೆ ಹಾಗೂ ಭೌಗೋಳಿಕ ವಿಭಿನ್ನತೆಯ ಮದ್ಯೆಯು ನಮ್ಮ ದೇಶ ಒಗ್ಗಟ್ಟಾಗಿ ನಿಂತಿದೆ. ಜನರ ಮೂಲಕದಿಂದ 2.5 ಕೋಟಿ ಜನರು ಬಡತನದಿಂದ ಮುಕ್ತವಾಗಿರುವ ನಮ್ಮ ದೇಶದಲ್ಲಿ ಆರ್ಥಿಕತೆ ಸತ್ತಿದೆ ಎಂದು ಹೇಳುವವರು ಬುದ್ದಿವಂತರು ಆಗುತ್ತಾರೆಯೇ? ಎಂದು ದೆಹಲಿ ಸ್ಕೂಲ್ ಆಫ್ ಎಕನಾಮಿಕ್ಸ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಣಕಾಸು ಸಚಿವೆ ಮಾತನಾಡಿದರು.
