
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ರವರು ಗೃಹಲಕ್ಷ್ಮೀ ಯೋಜನೆಯನ್ನು ಪಡೆಯುತ್ತಿರುವವರ ಪಟ್ಟಿಯಲ್ಲಿ ಯಾವುದೇ ಪರಿಷ್ಕರಣೆ ಇಲ್ಲಾ ಎಂಬುದಾಗಿ ತಿಳಿಸಿದ್ದಾರೆ. ಪ್ರತೀ ತಿಂಗಳು ಫಲಾನುಭವಿಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ನೊಂದಾಯಿಸಿದ ಪ್ರತಿ ಫಲಾನುಭವಿಗಳಿಗೆ ಹಣ ತಲುಪುತ್ತಿದೆ ಎನ್ನಲಾಗಿದೆ.
ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳ ಮೂಲಕ ಹಣ ಸಂದಾಯವಾಗಬೇಕಿದೆ ಎಂದು ಕೇಂದ್ರದ ನಿಯಮ ಜಾರಿಯಲ್ಲಿರುವ ಕಾರಣ ಫಲಾನುಭಿಗಳಿಗೆ ಹಣ ತಲುಪುವಲ್ಲಿ ಸ್ವಲ್ಪ ತಡವಾಗುತ್ತಿದೆ ಎಂದು ಹೇಳಿದ್ದಾರೆ. ಈಗಾಗಲೆ ಏಪ್ರೀಲ್ ತಿಂಗಳ ಹಣ ಗೃಹಿಣಿಯರ ಖಾತೆಗೆ ಬಿಡುಗಡೆಯಾಗಿದ್ದು ಮೇ ತಿಂಗಳ ಹಣ ವರ್ಗಾವಣೆ ಆಗಬೇಕಿದೆ ಎಂದರು.