
ಹಾಸನ: ಕಟ್ಟಳ್ಳಿ ಗ್ರಾಮದ ಕೃಷ್ಣಮೂರ್ತಿ ಹಾಗೂ ರೂಪ ದಂಪತಿಯ ಪುತ್ರಿ ಸುಪ್ರೀಯಾ(22) ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ವಾಸವಿದ್ದು, ಪದವಿ ವ್ಯಾಸಂಗ ಮಾಡುತ್ತಿದ್ದರು. ಹಾಗೆಯೇ ವಿದ್ಯಾಭ್ಯಾಸದ ಜೊತೆಯಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನೆ ಸುಪ್ರಿಯಾಗೆ ಎದೆನೋವು ಕಾಣಿಸಿಕೊಂಡಿದ್ದು ಪೋಷಕರ ಬಳಿ ತಿಳಿಸಿದ್ದಾರೆ. ಪೋಷಕರು ಕೂಡಲೇ ಮಗಳನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು ಆದರೆ ಅಷ್ಟರೊಳಗೆ ಸುಪ್ರಿಯಾ ಮರಣಹೊಂದಿದ್ದಾರೆ. ಕಳೆದ ಒಂದು ತಿಂಗಳಿನಲ್ಲಿ ಹಾಸನದಲ್ಲಿ 15 ಮಂದಿ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ ಎನ್ನಲಾಗಿದೆ.