ಚಿಕ್ಕಮಗಳೂರು: ಕೆರೆಯಲ್ಲಿ ಈಜಲು ತೆರಳಿದ್ದ ಮೂವರು ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದುರ್ಘಟನೆ ಚಿಕ್ಕಮಗಳೂರು ತಾಲೂಕಿನ ಮರ್ಲೆ ಗ್ರಾಮದಲ್ಲಿ ನಡೆದಿದೆ. ಶಾಲೆಗೆ ರಜೆ ಇದ್ದ ಕಾರಣ 12 ವರ್ಷದ ಮೂವರು ವಿದ್ಯಾರ್ಥಿಗಳು ಗ್ರಾಮದ ಚಿಕ್ಕ ಕೆರೆಗೆ ಈಜಲು ತೆರಳಿದ್ದರು. ಕೆರೆಯಲ್ಲಿದ್ದ ಗುಂಡಿಯಲ್ಲಿ ಈಜುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿ ತರುಣ್, ಭುವನ್ ಹಾಗೂ ಲಿಖಿತ್ ಮೃತಪಟ್ಟಿದ್ದಾರೆ. ಘಟನೆ ತಿಳಿದು ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
