
ಈಶಾನ್ಯ ಮಾನ್ಸೂನ್ ಪ್ರಭಾವದಿಂದ ದೇಶದಾದ್ಯಂತ ಅಕಾಲಿಕ ಮಳೆ ಸುರಿಯುತ್ತಿದ್ದು, ಇಂದು ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಮತ್ತು ಗೋವಾದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಹೌದು, ಮತ್ತೆ ಮಳೆಯ ಅಬ್ಬರ ಆರಂಭವಾಗಿದ್ದು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ರಾಜ್ಯದ ೨೫ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ಸುರಿಯುತ್ತಿರುವ ಅಕಾಲಿಕ ಮಳೆಯಿಂದ ರೈತರು ತತ್ತರಿಸಿದ್ದು, ಚಳಿ ಬಿದ್ದರೂ ಇನ್ನೂ ಮಳೆಗಾಲ ಮುಗಿಯುವಂತೆ ಕಾಣುತ್ತಿಲ್ಲ.