ರಾಜ್ಯದಲ್ಲಿ ಮುಂಗಾರು ಮತ್ತೆ ಬಿರುಸುಗೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡು ಪ್ರದೇಶದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಜನರು ಎಚ್ಚರಿಕೆಯಿಂದ ಇರಬೇಕೆಂದು ಅಧಿಕಾರಿಗಳು ಸೂಚಿಸಿದ್ದಾರೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಾಗಲಕೋಟೆ, ವಿಜಯನಗರ, ದಾವಣಗೆರೆ, ಕೋಲಾರ ಸೇರಿದಂತೆ ಹಲವು ಜಿಲ್ಲೆಗಳಲ್ಲೂ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
