ಬೆಂಗಳೂರು: ಹೊಸವರ್ಷಕ್ಕೆ ಖಾಕಿ ಪಡೆ ಫುಲ್ ಅಲರ್ಟ್ ಆಗಿದೆ. ಈಗಾಗಲೇ ನಗರ ಪರಿಶೀಲನೆ ನಡೆಸಿದ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಬಳಿಕ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆ ವಹಿಸಿದ್ದು, ಇನ್ನೂ ಹೊಸ ವರ್ಷಾಚರಣೆ ರಾತ್ರಿ ಬೆಂಗಳೂರಿನ ಕೆಲವೆಡೆ ರಸ್ತೆ ನಿರ್ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಮಾಹಿತಿ ಹಂಚಿಕೊಂಡಿದ್ದಾರೆ.
