ಕೊಟ್ಟಿಗೆಹಾರ: ಮೂಡಿಗೆರೆಯಿಂದ ಕೊಟ್ಟಿಗೆಹಾರ ಕಡೆಗೆ ಸಾಗುತ್ತಿದ್ದ ಐಸ್ಕ್ರೀಂ ಪಿಕಪ್ ವಾಹನವು ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯ ಚಕ್ಮಕ್ಕಿ ಪ್ರದೇಶದಲ್ಲಿ ಪಲ್ಟಿಯಾದ ಘಟನೆ ನಡೆದಿದೆ. ಅಪಘಾತದಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಅಪಘಾತದ ತಕ್ಷಣ ಸ್ಥಳೀಯರು ಧಾವಿಸಿ ಗಾಯಗೊಂಡ ಚಾಲಕನಿಗೆ ಸಹಾಯ ಮಾಡಿದ್ದಾರೆ.
