ಬೆಂಗಳೂರು: ಬೆಂಗಳೂರು, ಮಂಡ್ಯ, ಹಾವೇರಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಇಂದು ಬೆಳಗ್ಗಿನ ಜಾವ ಏಕಕಾಲದಲ್ಲಿ ದಾಳಿ ನಡೆಸಿ ಅಧಿಕಾರಿಗಳಿಗೆ ಶಾಕ್ ನೀಡಿದ್ದು, ಬೆಂಗಳೂರಿನ ಆರ್.ಟಿ.ಓ ಸೂಪರಿಂಟೆಂಡೆಂಟ್ ಕುಮಾರಸ್ವಾಮಿ, ಮಂಡ್ಯ ನಗರ ಪಾಲಿಕೆ ಸಿ. ಎ.ಓ ಪುಟ್ಟಸ್ವಾಮಿ, ಬೀದರ್ ಕೃಷ್ಣಾ ಮೇಲ್ದಂಡೆ ಯೋಜನೆಯ ಮುಖ್ಯ ಇಂಜಿನಿಯರ್ ಪ್ರೇಮ್ ಸಿಂಗ್ ಸೇರಿದಂತೆ 11 ಅಧಿಕಾರಿಗಳ ಮನೆಗಳು ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ. ಧಾರವಾಡದ ಅಂಬೇಡ್ಕರ್ ಸ್ಟಡೀಸ್ ಸಂಯೋಜಕ ನಾಟೀಕರ್ ಅವರ ಮನೆ ಮತ್ತು ಕಚೇರಿಗಳ ಮೇಲೂ ತಪಾಸಣೆ ನಡೆದಿದ್ದು ಇದೇ ದಿನ ಅವರು ಕುಲಸಚಿವರಾಗಿ ಅಧಿಕಾರ ವಹಿಸಿಕೊಳ್ಳಬೇಕಿದ್ದ ಕಾರಣ ಲೋಕಾಯುಕ್ತ ದಾಳಿ ಅವರಿಗೆ ದೊಡ್ಡ ಶಾಕ್ ಆಗಿದೆ.
