
ಚಿಕ್ಕಮಗಳೂರು: ಆರದವಳ್ಳಿ ಭೂತಪ್ಪ ದೇವಾಲಯದ ಸಮೀಪ ಅಕ್ರಮವಾಗಿ ಅಂದರ್-ಬಾಹರ್ ಇಸ್ಪೀಟು ಜೂಜಾಟ ನಡೆಸುತ್ತಿದ್ದ ಏಳು ಮಂದಿಯನ್ನು ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಪತ್ತೆಹಚ್ಚಿದ್ದಾರೆ. ಬಾತ್ಮೀದಾರರಿಂದ ಬಂದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಪಂಚರ ಸಮಕ್ಷಮದಲ್ಲಿ ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳದಲ್ಲಿ 52 ಇಸ್ಪೀಟು ಎಲೆಗಳು ಹಾಗೂ ಪಣಕ್ಕೆ ಇಡಲಾಗಿದ್ದ ₹11,600 ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿ, ಸ್ವತ್ತುಗಳನ್ನು ವಶಕ್ಕೆ ಪಡೆದು ಠಾಣೆಗೆ ತರಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದ ಅನುಮತಿ ಪಡೆದ ನಂತರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೊ.ನಂ. 338/2026ರಡಿ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 87ರ ಅನ್ವಯ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.




