
ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಮರೆಗುದ್ದಿ ಗ್ರಾಮದ ಶ್ರೀ ದಿಗಂಬರೆಶ್ವರ ಸಂಸ್ಥಾನ ಮಠದಲ್ಲಿ ಸುಮಾರು ಎಂಟು ಕೆಜಿ ತೂಕದ ಬೆಳ್ಳಿ ಮೂರ್ತಿ ಹಾಗೂ ಎರಡು ಬಂಗಾರದ ಕನಬಟ್ಟು ಜೊತೆಗೆ ದೇಣಿಗೆ ಪೆಟ್ಟಿಗೆಯನ್ನು ಕಳ್ಳತನ ಮಾಡಿ ಕಳ್ಳರು ಪರಾರಿಯಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಇನ್ನು ಘಟನಾ ಸ್ಥಳಕ್ಕೆ ಸಿಪಿಐ ಮಲ್ಲಪ್ಪ ಮಡ್ಡಿ ಗ್ರಾಮೀಣ ಪೊಲೀಸ್ ಠಾಣೆ ಪಿಎಸ್ಐ ಗಂಗಾಧರ್ ಪೂಜಾರಿ ಅವರ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಜೊತೆಗೆ ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಕೂಡ ಭೇಟಿ ನೀಡಿ ಪರಿಸೀಲನೇ ನೆಡೆಸಿದ್ದಾರೆ. ಜಮಖಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.