ಹೊನ್ನಾವರ: ಬಾದಾಮಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಮಾರ್ಗ ಮಧ್ಯೆಯೇ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, 20ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಬೆಳಗ್ಗೆ ಸಂಭವಿಸಿದ್ದು, ದೇವರ ದರ್ಶನಕ್ಕೆ ತೆರಳಬೇಕಿದ್ದ ಜನರು ಅಪಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಧರ್ಮಸ್ಥಳಕ್ಕೆ ಹೋಗಬೇಕಿದ್ದ ಬಸ್ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಸೂಳೆಮೂರ್ತಿ ಕ್ರಾಸ್ ಬಳಿ ನಡೆದಿದೆ. 40ಕ್ಕೂ ಹೆಚ್ಚು ಜನಗಳಿದ್ದ ಬಸ್ ವೇಗವಾಗಿ ಬಂದು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಅಪಘಾತ ಸಂಭವಿಸಿದ್ದು, ತಕ್ಷಣ ಇದನ್ನು ಕಂಡ ಸುತ್ತಮುತ್ತಲಿನ ಜನರು ಪ್ರಯಾಣಿಕರನ್ನು ರಕ್ಷಿಸಿದ್ದಾರೆ.
