
ಚಿಕ್ಕಮಗಳೂರು: ನಡು ರಸ್ತೆಯಲ್ಲೇ ಎಲೆಕ್ಟ್ರಿಕ್ ಬೈಕ್ವೊಂದು ಧಗಧಗನೆ ಹೊತ್ತಿ ಉರಿದ ಘಟನೆ ಕಡೂರು ತಾಲೂಕಿನ ಪಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೈಕ್ನಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಸವಾರ ಕೂಡಲೇ ಕೆಳಗಿಳಿದಿದ್ದರಿಂದ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದು, ಪಂಚನಹಳ್ಳಿ ಗ್ರಾಮದ ನಂದೀಶ್ ಅವರಿಗೆ ಸೇರಿದ ಎಲೆಕ್ಟ್ರಿಕ್ ಬೈಕ್ ಇದಾಗಿದ್ದು, ಸುಮಾರು ಒಂದೂವರೆ ವರ್ಷದ ಹಿಂದೆ ಹುಳಿಯಾರದಿಂದ ಸೆಕೆಂಡ್ ಹ್ಯಾಂಡ್ ಆಗಿ ಖರೀದಿಸಿದ್ದರು ಎನ್ನಲಾಗಿದೆ. ತೋಟದ ಕೆಲಸ ಮುಗಿಸಿಕೊಂಡು ಮನೆಗೆ ಹಿಂದಿರುಗುತ್ತಿದ್ದ ವೇಳೆ ನಡು ರಸ್ತೆಯಲ್ಲೇ ಬೈಕ್ನಿಂದ ಹೊಗೆ ಕಾಣಿಸಿಕೊಂಡಿದ್ದು, ಕೂಡಲೇ ನಂದೀಶ್ ಬೈಕ್ನಿಂದ ಕೆಳಗಿಳಿದ ಕೆಲವೇ ಕ್ಷಣಗಳಲ್ಲಿ ಬೈಕ್ಗೆ ಬೆಂಕಿ ಹೊತ್ತಿಕೊಂಡಿದೆ. ರಸ್ತೆ ಮಧ್ಯೆ ಬೆಂಕಿ ಹೊತ್ತಿಕೊಂಡಿದ್ದರಿಂದ ತಕ್ಷಣ ನೀರು ಸಿಗದೆ, ನಂದೀಶ್ ನೀರಿಗಾಗಿ ಹುಡುಕಾಡುವಷ್ಟರಲ್ಲಿ ಬೆಂಕಿಯಲ್ಲಿ ಬೈಕ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ವರದಿ: ಸಂತೋಷ್ ಅತ್ತಿಗೆರೆ




