
Screenshot
ಕೊಡಗು: ಜಿಲ್ಲೆಯಲ್ಲಿ ವರುಣನ ಆರ್ಭಟ ಮತ್ತಷ್ಟು ಜೋರಾಗುವ ಮುನ್ಸೂಚನೆ ಇದೆ ಎಂದು ಹವಮಾನ ಇಲಾಖೆ ತಿಳಿಸಿರುವುದರಿಂದ ಜನರು ಆತಂಕಗೊಂಡಿದ್ದಾರೆ. ಮಳೆ ಆರ್ಭಟಕ್ಕೆ ಈಗಾಗಲೇ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದ್ದು, ಅಲ್ಲಲ್ಲಿ ಮಣ್ಣು ಸಡಿಲವಾಗುತ್ತಿದೆ. ಪರಿಣಾಮ 2018 ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪ, 2019ರಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿ ಮರುಕಳಿಸಿವ ಆತಂಕ ಜನರನ್ನು ಭೂತದಂತೆ ಕಾಡಲಾರಂಭಿಸಿದೆ. ಭೂ ಕುಸಿತದ ಸ್ಥಳಗಳನ್ನು ಗುರುತಿಸಿ, ನದಿ ತೀರದ ವಾಸಿಗಳ ಸ್ಥಳಾಂತರ ಹೀಗೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗಿದೆ.
ಹಲವು ಸಂಘ ಸಂಸ್ಥೆಗಳ ಪ್ರಮುಖರ ಸಭೆ ಕರೆದು ಪ್ರಾಕೃತಿಕ ವಿಕೋಪ ಎದುರಾದರೆ ಇಲಾಖೆಯೊಂದಿಗೆ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಿಸಲು ಸಜ್ಜಾಗಿರುವಂತೆ ಜಿಲ್ಲಾ ಪೋಲಿಸ್ ಇಲಾಖೆ ಸೂಚನೆ ನೀಡಿದೆ. ನಗರ ಮೈತ್ರಿ ಸಭಾಂಗಣದಲ್ಲಿ ಪ್ರಕೃತಿಕ ವಿಕೋಪ ಸಂದರ್ಭ ಸಾರ್ವಜನಿಕರಿಗೆ ಹೇಗೆ ಸಹಾಯ ಮಾಡಬೇಕು ಎಂಬ ಬಗ್ಗೆ ಮಾಹಿತಿ ನೀಡಿ ಇಲಾಖೆಗೆ ಸಹಕಾರ ನೀಡಬೇಕೆಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಸೇರಿದಂತೆ ಹಿರಿಯ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.