
ಕೊಟ್ಟಿಗೆಹಾರ: ಮೂಡಿಗೆರೆ ತಾಲ್ಲೂಕಿನ ಹೊರಟ್ಟಿ ಗ್ರಾಮದಲ್ಲಿ ಕಾರಿಗೆ ಗುದ್ದಿದ ರಭಸಕ್ಕೆ ಕಾರಿನ ಹಿಂದಿನ ಗ್ಲಾಸ್ನಲ್ಲಿ ಉಳಿದ ಬೈಕ್ ಸವಾರನ ಹೆಲ್ಮೆಟ್. ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪಿಕಪ್, ಕಾರು, ಬೈಕು ನಡುವೆ ಭೀಕರ ಸರಣಿ ಅಪಘಾತವಾಗಿದೆ. ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಸರಣಿ ಅಪಘಾತದಿಂದ ಎನ್.ಎಚ್ 173ನಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ಬಣಕಲ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.