ಬೆಂಗಳೂರು: ಬೆಂಗಳೂರಿನಿಂದ ಗದಗಕ್ಕೆ ತೆರಳುತ್ತಿರುವ ಬಸ್ಸ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಬಸ್ ಹೊತ್ತಿ ಉರಿದ ಭೀಕರ ಘಟನೆ ನಡೆದಿದೆ, ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ದೇವರಗುಡ್ಡ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಚಾಲಕನ ಸಮಯ ಪ್ರಜ್ಞೆಯಿಂದಾಗಿ ಬಸ್ಸಿನಲ್ಲಿದ್ದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಕಿ ಕಾಣಿಸಿಕೊಂಡ ಕೆಲವೇ ನಿಮಿಷಗಳಲ್ಲಿ ಇಡೀ ಬಸ್ ಬೆಂಕಿಗೆ ಆಹುತಿಯಾಗಿದ್ದು, ಸಾರಿಗೆ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟರ ಪ್ರಯೋಜನವಾಗಲಿಲ್ಲ. ಘಟನಾ ಸ್ಥಳಕ್ಕೆ ರಾಣೇಬೆನ್ನೂರು ಗ್ರಾಮೀಣ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
