
ಚಿಕ್ಕಮಗಳೂರು: ತಾಲೂಕಿನ ಕೆರೆಮನೆ ಎಸ್ಟೇಟ್ನಲ್ಲಿ ಸಿಲ್ವರ್ ಮರ ಹತ್ತಿ ಮರಗಸಿ ಮಾಡುವಾಗ ವಿದ್ಯುತ್ ಶಾಕ್ ತಗುಲಿ ಕೂಲಿ ಕಾರ್ಮಿಕನೊಬ್ಬ ಸಾವನ್ನಪ್ಪಿದ ದುರ್ಘಟನೆ ಸಂಭವಿಸಿದೆ. ತಮಿಳುನಾಡು ಮೂಲದ 45 ವರ್ಷದ ಆರ್ಮುಗಂ ಮೃತ ದುರ್ದೈವಿ ಎಂದು ಗುರುತಿಸಲಾಗಿದ್ದು, ಬಾಬರ್ ಎಂಬುವರ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಮರ ಹತ್ತಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಪ್ರವಹಿಸಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನೆ ತಿಳಿಯುತ್ತಿದ್ದಂತೆ ಮಲ್ಲಂದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮಲ್ಲಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.





