
ಬೆಂಗಳೂರು: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಕೊನೆಯ ಕ್ಷಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರಂಭಿಕ ಪಟ್ಟಿಯಲ್ಲಿ ಕಾಂಗ್ರೆಸ್ ಶಾಸಕಿ ಗಾಯತ್ರಿ ಶಾಂತೇಗೌಡ ಅವರ ಹೆಸರು ಕಂಡುಬಂದಿದ್ದು, ಕೊನೆಯ ಕ್ಷಣದಲ್ಲಿ ಸಚಿವ ಸ್ಥಾನ ಕೈತಪ್ಪಿದೆ. ಅವರ ಹೆಸರನ್ನು ಅಂತಿಮ ಪಟ್ಟಿಯಿಂದ ಕೈಬಿಡಲಾಗಿದ್ದು, ಉಳಿದ 19 ಮಂದಿ ಶಾಸಕರು ಇದೀಗ ರಾಜಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದು, ಕೊನೆಯ ಕ್ಷಣದ ಬದಲಾವಣೆಯ ಹಿಂದಿನ ಕಾರಣಗಳ ಬಗ್ಗೆ ಕುತೂಹಲ ಹೆಚ್ಚಿದೆ.



