
ಶೃಂಗೇರಿ: ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ನೆರವಾಗುವ ಉದ್ದೇಶದಿಂದ LIC Golden Jubilee Foundation Scholarship-2026ಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರಿಸಲು ವಿದ್ಯಾರ್ಥಿವೇತನ ನೀಡಲಾಗುತ್ತಿದ್ದು, 2025-26ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ, ಪದವಿ ಶಿಕ್ಷಣ ಅಥವಾ ಡಿಪ್ಲೋಮಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಉತ್ತಮ ಶೈಕ್ಷಣಿಕ ಸಾಧನೆ ಹೊಂದಿರುವ ವಿದ್ಯಾರ್ಥಿಗಳು, ನಿಗದಿತ ಆದಾಯ ಮಿತಿಯೊಳಗಿನ ಕುಟುಂಬಗಳಿಗೆ ಸೇರಿದವರು ಹಾಗೂ ಕನಿಷ್ಠ 60% ಅಂಕಗಳನ್ನು ಪಡೆದಿರುವ ಅರ್ಹ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಆಧಾರ್ ಕಾರ್ಡ್, ಅಂಕಪಟ್ಟಿ, ಆದಾಯ ಪ್ರಮಾಣಪತ್ರ, ಕಾಲೇಜು ಪ್ರವೇಶ ದಾಖಲೆ ಹಾಗೂ ಬ್ಯಾಂಕ್ ಖಾತೆ ವಿವರಗಳನ್ನು ಸಲ್ಲಿಸಬೇಕಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 15, 2026 ಆಗಿದ್ದು, ಹೆಚ್ಚಿನ ಮಾಹಿತಿಗಾಗಿ ಶೃಂಗೇರಿಯ ಮ್ಯಾಮ್ಕೋಸ್ ಮುಂಭಾಗ, ಭಾರತೀ ಬೀದಿ 9482670066 ಸಂಖ್ಯೆಗೆ ಸಂಪರ್ಕಿಸಬಹುದು.




