
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೆಳಗೂರು ಗ್ರಾಮದ ರಸ್ತೆ ತಿರುವಿನಲ್ಲಿ ಲಾರಿ ಪಲ್ಟಿಯಾದ ಘಟನೆ ನಡೆದಿದೆ. ಸುಮಾರು 50 ಅಡಿ ಎತ್ತರದಿಂದ ಕೆಳಗೆ ಬಿದ್ದ ಲಾರಿಯಲ್ಲಿ ಚಾಲಕ ಒಳಗೇ ಸಿಲುಕಿಕೊಂಡಿದ್ದು, ಅದೃಷ್ಟವಶಾತ್ ಲಾರಿ ಮನೆಯ ಬಾಗಿಲಿನ ಬಳಿ ಸಿಲುಕಿದ್ದರಿಂದ ದೊಡ್ಡ ಮಟ್ಟದ ಅನಾಹುತ ತಪ್ಪಿದೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಹಾಗೂ ಕ್ರೇನ್ ಸಹಾಯದಿಂದ ಲಾರಿಯನ್ನು ನೇರಗೊಳಿಸಿ, ಸುಮಾರು ಎರಡು ಗಂಟೆಗಳ ಕಾಲ ಒಳಗೆ ಸಿಲುಕಿದ್ದ ಚಾಲಕನನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಸದ್ಯ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂಬ ಅನುಮಾನ ವ್ಯಕ್ತವಾಗಿದೆ. ಈ ಕುರಿತು ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಡಿಯೋ ನೋಡಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:





