
ಮಡಿಕೇರಿ: ಮಡಿಕೇರಿ ತಾಲ್ಲೂಕಿನ ಕೊಂಡಂಗೇರಿಯ ಗ್ರಾಮದಲ್ಲಿ ನೀರು ಕೇಳುವ ನೆಪದಲ್ಲಿ ಬಂದ ಕಳ್ಳನೊಬ್ಬ ಚಿನ್ನದ ಸರವನ್ನು ಅಪಹರಿಸಿದ ಘಟನೆ ಬೆಳಕಿಗೆ ಬಂದಿದ್ದು. ಆರೋಪಿಯನ್ನು ಪಾಲಿಬೆಟ್ಟ ಗ್ರಾಮದ ಮುನ್ನಾವರ್ ಎಂದು ಪತ್ತೆ ಹಚ್ಚಲಾಗಿದೆ. ಸಾರಮ್ಮ ಹಾಗೂ ಸಫಾನ ಅವರ ಮನೆಗೆ ಬಂದು ಹಲ್ಲೆ ನಡೆಸಿ ಚಿನ್ನಾಭರಣವನ್ನು ಎಗರಿಸಿದ್ದಾನೆ. ಈ ಸುದ್ಧಿ ಗ್ರಾಮಸ್ಥರ ಗಮನಕ್ಕೆ ಬರುತ್ತಿದ್ದಂತೆ, ಆರೋಪಿಯನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಪೋಲಿಸರ ವಶಕ್ಕೆ ನೀಡಿದ್ದಾರೆ.
ಹಲ್ಲೆಗೊಳಗಾಗಿದ್ದ ಸಾರಮ್ಮ, ಸಫಾನರನ್ನು ಹಾಗೂ ಆರೋಪಿ ಮುನ್ನಾವರ್ನನ್ನು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಡಗು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರು ಆಸ್ಪತ್ರೆಗೆ ತೆರಳಿ ಮಾಹಿತಿಯನ್ನು ಕಲೆಹಾಕಿದ್ದಾರೆ. ಹಾಗೆಯೇ ಇಂತಹ ಸಂದರ್ಭಗಳು ಬಂದಾಗ ಪೋಲಿಸ್ ಸಹಾಯವಾಣಿ 112 ಗೆ ಕರೆ ಮಾಡಬೇಕು ಅಥವಾ ಸ್ಥಳೀಯ ಪೋಲಿಸ್ ಠಾಣೆಗೆ ಮಾಹಿತಿ ನೀಡುವಂತೆ ತಿಳಿಸಿದ್ದಾರೆ. ಸಿದ್ದಾಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿಸರು ಪರಿಶೀಲನೆ ನಡೆಸಿದ್ದಾರೆ.