ಬೆಂಗಳೂರು: ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾಪಿಸಿದ್ದು, ಇಂತಹ ಕಾನೂನು ಜಾರಿಗೆ ಬಂದರೆ ಕೇರಳದ ಗಡಿಜಿಲ್ಲೆಗಳಲ್ಲಿ ಮುಖ್ಯವಾಗಿ ಕಾಸರಗೋಡಿನಲ್ಲಿ ವಾಸಿಸುತ್ತಿರುವ ಕನ್ನಡಿಗರು ಮಾತೃಭಾಷೆಯನ್ನು ಕಲಿಯುವ ಅವಕಾಶದಿಂದ ವಂಚಿತರಾಗಲಿದ್ದಾರೆ. ಭಾಷಾ ಅಲ್ಪಸಂಖ್ಯಾತರ ಮೂಲಭೂತ ಹಕ್ಕನ್ನು ದಮನ ಮಾಡುವ ಇಂತಹ ಕೇರಳ ರಾಜ್ಯದಲ್ಲಿ ಮಲೆಯಾಳಿ ಭಾಷೆಯನ್ನು ಬೆಳೆಸುವ ಮತ್ತು ಉಳಿಸುವ ಸರ್ವ ಸ್ವಾತಂತ್ರ್ಯ ಇದೆ. ಆದರೆ ಒಂದು ಭಾಷೆಯ ಮೇಲೆ ಇನ್ನೊಂದು ಭಾಷೆಯನ್ನು ಹೇರುವ ಪ್ರಯತ್ನ ಸಲ್ಲದು. ಈ ಮಸೂದೆಯನ್ನು ಜಾರಿಗೊಳಿಸಲು ಹೊರಟರೆ ಕನ್ನಡಿಗರು ವಿರೋಧಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
