
ಚಿಕ್ಕಮಗಳೂರು: ನಗರದ ಉಂಡೇದಾಸರಹಳ್ಳಿ ಬಡಾವಣೆಯಲ್ಲಿ ಬಾವಿ ಸ್ವಚ್ಛಗೊಳಿಸುವ ವೇಳೆ ಆಮ್ಲಜನಕದ ಕೊರತೆಯಿಂದ ಮೋಹನ್ (40) ಎಂಬ ವ್ಯಕ್ತಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ದರ್ಶನ್ ಎಂಬುವರ ಮನೆಯ ಬಾವಿಯನ್ನು ಕ್ಲೀನ್ ಮಾಡಲು ಮೋಹನ್ ಬಾವಿಯೊಳಗೆ ಇಳಿದಿದ್ದ ವೇಳೆ ಉಸಿರಾಟದ ತೊಂದರೆ ಉಂಟಾಗಿ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




