
ಮಂಗಳೂರು: ಮಂಗಳೂರು ವಿವಿಯಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನ, ಮಂಗಳೂರು ವಿಶ್ವವಿದ್ಯಾನಿಲಯವು 2026-27ನೇ ಶೈಕ್ಷಣಿಕ ಸಾಲಿಗೆ ವಿವಿಧ ಸ್ನಾತಕೋತ್ತರ ವಿಭಾಗಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಕನ್ನಡ, ಇಂಗ್ಲಿಷ್, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಪತ್ರಿಕೋದ್ಯಮ, ಬಯೋಟೆಕ್ನಾಲಜಿ, ಕಂಪ್ಯೂಟರ್ ಸೈನ್ಸ್, ಕಾಮರ್ಸ್ ಸೇರಿದಂತೆ ಹಲವು ವಿಭಾಗಗಳಲ್ಲಿ ನೇಮಕಾತಿ ನಡೆಯಲಿದೆ. ಅರ್ಜಿದಾರರು ಸಂಬಂಧಿತ ವಿಷಯದಲ್ಲಿ ಕನಿಷ್ಠ 55% ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ (SC/ ST ಅಭ್ಯರ್ಥಿಗಳಿಗೆ 50%) ಹೊಂದಿರಬೇಕು. ಸಾಮಾನ್ಯ ಅಭ್ಯರ್ಥಿಗಳಿಗೆ 250 ಹಾಗೂ SC/ST/CAT-1 ಅಭ್ಯರ್ಥಿಗಳಿಗೆ 125 ಅರ್ಜಿ ಶುಲ್ಕ ನಿಗದಿಯಾಗಿದ್ದು, ಹೆಚ್ಚುವರಿ ಪ್ರತಿ ಅರ್ಜಿಗೆ 100 ಪಾವತಿಸಬೇಕು. ಅರ್ಜಿ ಶುಲ್ಕವನ್ನು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ ಪಾವತಿಸಿ ಇ-ರಶೀದಿಯನ್ನು ಅರ್ಜಿಯೊಂದಿಗೆ ಅಪ್ಲೋಡ್ ಮಾಡಬೇಕು. ಅಭ್ಯರ್ಥಿಗಳು ಆನ್ಲೈನ್ ಅರ್ಜಿಯಲ್ಲಿ ಇ-ಮೇಲ್ ಮತ್ತು ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು. ಆಯ್ಕೆ ಪ್ರಕ್ರಿಯೆಯು ಯುಜಿಸಿ ಮಾನದಂಡಗಳು ಹಾಗೂ ರಾಜ್ಯ ಸರ್ಕಾರದ ಮೀಸಲಾತಿ ನಿಯಮಗಳಂತೆ ನಡೆಯಲಿದ್ದು, ಸಂದರ್ಶನದ ವೇಳೆ ಶೈಕ್ಷಣಿಕ ದಾಖಲೆಗಳು ಹಾಗೂ ಅಗತ್ಯ ಪ್ರಮಾಣಪತ್ರಗಳ ಮೂಲ ಮತ್ತು ಸ್ವಯಂ ದೃಢೀಕರಿಸಿದ ಪ್ರತಿಗಳನ್ನು ಸಲ್ಲಿಸಬೇಕಾಗಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 1, 2026 ಕೊನೆಯ ದಿನವಾಗಿದೆ.




