
ಚಾಮರಾಜನಗರ: ಜಿಲ್ಲೆಯ ಚಾಮರಾಜನಗರ ತಾಲೂಕಿನ ಅಮಚವಾಡಿ ಗ್ರಾಮದಲ್ಲಿ ಮೇ 25ರಂದು ಶ್ರೀ ಮಂಟೇಸ್ವಾಮಿ ಸಿದ್ದಪ್ಪಾಜಿ ಕೊಂಡೋತ್ಸವವು ಭಕ್ತಿ ಹಾಗೂ ಸಂಭ್ರಮದ ವಾತಾವರಣದಲ್ಲಿ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಗ್ರಾಮದಲ್ಲಿ ಕಂಡಾಯಗಳ ಭವ್ಯ ಮೆರವಣಿಗೆ ನಡೆಸಲಾಗಿದ್ದು, ಸುಮಾರು 10 ರಿಂದ 12 ಮಂದಿ ಮಂಟೇಸ್ವಾಮಿ ಭಕ್ತರು ಸಂಪ್ರದಾಯದಂತೆ ಕೊಂಡ ಹಾಯುವ ಮೂಲಕ ತಮ್ಮ ಭಕ್ತಿಯನ್ನು ಅರ್ಪಿಸಿದರು. ಕೊಂಡೋತ್ಸವದಲ್ಲಿ ಸುತ್ತಮುತ್ತಲಿನ ಪ್ರದೇಶಗಳಿಂದ ಆಗಮಿಸಿದ್ದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಧಾರ್ಮಿಕ ಕಾರ್ಯಕ್ರಮಕ್ಕೆ ಪಾಲ್ಗೊಂಡಿದ್ದರು. ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಪುಟ್ಟರಂಗಶೆಟ್ಟಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಜೊತೆಗೆ ಕಾರ್ಯದರ್ಶಿಗಳು, ಅಮಚವಾಡಿ ಯುವಕರ ಸಂಘದ ಅಧ್ಯಕ್ಷ ರಘು ಎಂ., ಉಪಾಧ್ಯಕ್ಷ ಸುನೀಲ್ ಹಾಗೂ ಸದಸ್ಯರಾದ ರವಿ ಎಂ., ನಿಂಗರಾಜು, ಮಲ್ಲೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.




