
ಮತ್ಸ್ಯಾಶ್ರಯ ಯೋಜನೆಯಡಿಯಲ್ಲಿ ಕರ್ನಾಟಕ ಸರ್ಕಾರವು 2024-2025 ನೇ ಸಾಲಿನಲ್ಲಿ ವಸತಿ ರಹಿತ ಮೀನಗಾರರಿಗೆ ಮನೆ ನಿರ್ಮಾಣಕ್ಕೆ ಆರ್ಥಿಕ ಸಹಾಯ ನೀಡುತ್ತಿದೆ. ಈ ಯೋಜನೆಯು ಸಾಮಾನ್ಯ ವರ್ಗದವರಿಗೆ 1.20 ಲಕ್ಷ ರೂ, ಗ್ರಾಮೀಣ ಪ್ರದೇಶದ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 1.57 ಲಕ್ಷ ರೂ, ನಗರ ಪ್ರದೇಶದ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ 2 ಲಕ್ಷ ರೂ ವರೆಗೆ ಸಹಾಯ ಧನ ನೀಡುತ್ತದೆ.
ಈ ಯೋಜನೆಯಡಿಯಲ್ಲಿ ಪ್ರಸ್ತುತ 5600 ಮನೆಗಳಿಗೆ ಅನುಮೋದನೆ ನೀಡಲಾಗಿದ್ದು. ವಿವಿಧ ಜಿಲ್ಲೆಗಳಲ್ಲಿ ವಾಸವಿರುವ ವಸತಿ ರಹಿತ ಮೀನುಗಾರ ಕುಟುಂಬಗಳಿಗೆ ಸರ್ಕಾರ ತಲಾ ನಿಗದಿತ ಮೊತ್ತದ ಆರ್ಥಿಕ ನೆರವು ನೀಡಿ, ಮನೆ ನಿರ್ಮಾಣದ ಅವಕಾಶವನ್ನು ನೀಡುತ್ತಿದೆ. ಈ ಯೋಜನೆ ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತ ಮೂಲಕ ರಾಜೀವ್ ಗಾಂಧಿ ವಸತಿ ನಿಗಮ ಲಿಮಿಟೆಡ್ ಸಹಕಾರದಲ್ಲಿ ಮತ್ತು ಆಶ್ರಯ ಆಪ್ ತಂತ್ರಜ್ಞಾನದ ಆಧಾರದ ಮೇಲೆ ಕಾರ್ಯಗತಗೊಳಿಸಲಾಗುತ್ತಿದೆ. ಆಶ್ರಯ ಆಪ್ ಆಧಾರಿತ ತಂತ್ರಜ್ಞಾನವನ್ನು ಬಳಸಿ ಅರ್ಜಿ ಸಲ್ಲಿಸಬಹುದಾಗಿದೆ. ರಾಜೀವ್ ಗಾಂಧಿ ವಸತಿ ನಿಗಮದ ನಿಯಮಾವಳಿಗಳ ಪ್ರಕಾರ ಫಲಾನುಭವಿಗಳಿಗೆ ಆಯ್ಕೆ ಮಾಡಲಾಗುತ್ತದೆ. ಅರ್ಜಿದಾರರು ತಮ್ಮ ಸ್ಥಳೀಯ ಮೀನುಗಾರಿಕೆ ಇಲಾಖಾ ಕಛೇರಿಗೆ ನೇರವಾಗಿ ಭೇಟಿ ನೀಡಿ ಅಗತ್ಯವಿರುವ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.