
ಮೂಡಿಗೆರೆ: 2026-27ನೇ ಸಾಲಿನ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ಭತ್ತದ ಬೆಳೆ ವಿಮೆ ನೋಂದಣಿ ಹಾಗೂ ರೈತರ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಜಾಗೃತಿ ಕುರಿತು ಮೂಡಿಗೆರೆ ಮತ್ತು ಕಳಸ ತಾಲ್ಲೂಕಿನ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಆಯೋಜಿಸಲಾಗಿರುವ ಆಟೋ ಪ್ರಚಾರಕ್ಕೆ ಮಾನ್ಯ ಮೂಡಿಗೆರೆ ಶಾಸಕಿಯಾದ ಶ್ರೀಮತಿ ನಯನ ಮೋಟಮ್ಮ ಅವರು ಚಾಲನೆ ನೀಡಿದರು. ರೈತರಿಗೆ ಬೆಳೆ ವಿಮೆ ನೋಂದಣಿ ಮತ್ತು ಬೆಳೆ ಸಮೀಕ್ಷೆ ಆ್ಯಪ್ ಕುರಿತು ಅರಿವು ಮೂಡಿಸುವ ಸಲುವಾಗಿ ಈ ವಿಶೇಷ ಪ್ರಚಾರ ವಾಹನಕ್ಕೆ ಚಾಲನೆ ನೀಡಲಾಗಿದ್ದು, ತಾಲ್ಲೂಕಿನ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿಯೂ ಇದು ಸಂಚರಿಸಿ ಜಾಗೃತಿ ಮೂಡಿಸಲಿದೆ. ಈ ಸಂದರ್ಭದಲ್ಲಿ ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು, ಕೃಷಿಕ ಸಮಾಜದ ಜಿಲ್ಲಾ ಪ್ರತಿನಿಧಿ ಪಿ.ಕೆ. ನಾಗೇಶ್, ಕಾರ್ಯಕಾರಿ ಸಮಿತಿ ಸದಸ್ಯರಾದ ಯತೀಶ್ ಬಿ.ಆರ್, ಜಗನ್ನಾಥ್ ಗೌಡ, ಚಂದ್ರಶೇಖರ್ ಹಾಗೂ ಕೆಡಿಪಿ ಸದಸ್ಯರಾದ ರವಿ, ಸಹಾಯಕ ಕೃಷಿ ನಿರ್ದೇಶಕರಾದ ಶ್ರೀಮತಿ ಸುಮ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ದಿವ್ಯ, ಕೃಷಿ ಅಧಿಕಾರಿ ಅಮರೇಶ್ ಹಾಗೂ ಆತ್ಮ ಯೋಜನೆಯ ತಾಂತ್ರಿಕ ವ್ಯವಸ್ಥಾಪಕರಾದ ಅನನ್ಯ ಮತ್ತು ರಶ್ಮಿ ಉಪಸ್ಥಿತರಿದ್ದರು. ಮೂಡಿಗೆರೆ ಮತ್ತು ಕಳಸ ತಾಲ್ಲೂಕಿನ ರೈತರು ಈ ಪ್ರಚಾರದ ಪ್ರಯೋಜನವನ್ನು ಪಡೆದುಕೊಂಡು, ಸಮಯಕ್ಕೆ ಸರಿಯಾಗಿ ಬೆಳೆ ವಿಮೆ ನೋಂದಣಿ ಹಾಗೂ ಬೆಳೆ ಸಮೀಕ್ಷೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳುವಂತೆ ಇಲಾಖೆಯ ಅಧಿಕಾರಿಗಳು ಮನವಿ ಮಾಡಿದ್ದಾರೆ.
ವರದಿ: ಸಂತೋಷ್ ಅತ್ತಿಗೆರೆ




