
ಚಿಕ್ಕಮಗಳೂರು: ಚಲಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರೊಂದು ಚಿಕ್ಕಮಗಳೂರು ನಗರದ ಬೃಹತ್ ಕೋಟೆಕೆರೆಯೊಳಗೆ ಬಿದ್ದ ಘಟನೆ ನಡೆದಿದೆ. ನಗರದ ಕೋಟೆಕೆರೆ ಬಳಿ ಕಾರು ನಿಯಂತ್ರಣ ತಪ್ಪಿ ಮೊದಲು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ರಸ್ತೆ ಮೇಲೆ ಮುರಿದು ಬಿದ್ದಿದೆ. ಬಳಿಕ ಕೆರೆಗೆ ಅಳವಡಿಸಿದ್ದ ಕಬ್ಬಿಣದ ಬೇಲಿಯನ್ನು ಮುರಿದು ಕಾರು ಕೆರೆಗೆ ಬಿದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ಬಳಿಕ ಪೊಲೀಸರು ಕ್ರೇನ್ ಸಹಾಯದಿಂದ ಕೆರೆಯೊಳಗಿದ್ದ ಕಾರನ್ನು ಮೇಲಕ್ಕೆತ್ತಿದ್ದಾರೆ. ಇದೇ ಮಾರ್ಗವಾಗಿ ತೆರಳುತ್ತಿದ್ದ ಸಿ.ಟಿ.ರವಿ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದಾರೆ. ಘಟನೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.




