
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಹೊಸದಾಗಿ 19 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಲೋಕಭವನದ ಗ್ಲಾಸ್ ಹೌಸ್ನಲ್ಲಿ ನಿನ್ನೆ ನಡೆದ ಅದ್ಧೂರಿ ಸಮಾರಂಭದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಅವರು ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದ್ದು, ಈ ಮೂಲಕ ಮುಖ್ಯಮಂತ್ರಿ ಸೇರಿದಂತೆ ಸಂಪುಟದ ಒಟ್ಟು ಸದಸ್ಯರ ಸಂಖ್ಯೆ ಗರಿಷ್ಠ ಮಿತಿ 33ಕ್ಕೆ ತಲುಪಿದೆ.




