
ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರೈಸಿರುವ ಹಿನ್ನಲೆಯಲ್ಲಿ, ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ಸರ್ಕಾರದ ಸಾಧನ ಸಮಾವೇಶ ನಡೆದ್ದಿದ್ದು, ಇಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಸಿ.ಎಂ ಚಾಲನೆ ನೀಡಿದ್ದಾರೆ. ವೇದಿಕೆಯ ಮುಂಭಾಗ ೨೦೦ ಮೀಟರ್ ರ್ಯಾಂಪ್ ಮಾಡಿದ್ದು, ಸಾವಿರಾರು ಜನರು ಈ ಕಾರ್ಯಕ್ರಮದಲ್ಲಿ ಸಾಕ್ಷಿಯಾಗಿದ್ದರು. ಸಮಾವೇಶದಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಇನ್ನಿತರು ಗಣ್ಯರು ಭಾಗಿಯಾಗಿದ್ದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿತ್ತು.