ಕೊಟ್ಟಿಗೆಹಾರ: ತರುವೆಯ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಎನ್ಸಿಸಿ ಘಟಕದ ಉದ್ಘಾಟನಾ ಸಮಾರಂಭ ಅದ್ಧೂರಿಯಾಗಿ ನೆರವೇರಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕರ್ನಲ್ ಮಂದೀಪ್ ಸಿಂಗ್ ಸೆಖೋನ್ ಅವರು, ಎನ್ಸಿಸಿ ವಿದ್ಯಾರ್ಥಿಗಳಲ್ಲಿ ಶಿಸ್ತು, ದೇಶಭಕ್ತಿ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ ಮಹತ್ವದ ವೇದಿಕೆಯಾಗಿದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಿನ್ಸಿಪಾಲ್ ಸತೀಶ್ ಪ್ರಸಾದ್ ಜೈಸ್ವಾಲ್ ಅವರು, ಎನ್ಸಿಸಿ ಮೂಲಕ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಉತ್ತಮ ಅವಕಾಶ ಸಿಗುತ್ತದೆ ಎಂದು ಅಭಿಪ್ರಾಯಪಟ್ಟರು. ಶಿಕ್ಷಣದ ಜೊತೆಗೆ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ವೃದ್ಧಿಗೆ ಇಂತಹ ಚಟುವಟಿಕೆಗಳು ಅಗತ್ಯವೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕರು, ಸಿಬ್ಬಂದಿಗಳು, ಕಚೇರಿ ಸಹಾಯಕರು ಸೇರಿದಂತೆ ಹಲವರು ಉಪಸ್ಥಿತರಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
