
ಎನ್ಆರ್ಪುರ: ಚಿಕ್ಕಮಗಳೂರು ಜಿಲ್ಲೆಯ ಎನ್ಆರ್ಪುರ ತಾಲ್ಲೂಕಿನಲ್ಲಿ ಅಪ್ರಾಪ್ತೆಯನ್ನು ಪ್ರೀತಿಸುತ್ತೇನೆ, ಮದುವೆಯಾಗುತ್ತೇನೆಂದು ದುರ್ಬಳಕೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅಪ್ರಾಪ್ತೆಯ ಜೊತೆ 10 ಬಾರಿ ಲೈಂಗಿಕ ದೌರ್ಜನ್ಯ ನಡೆಸಿರುವ ಗುರುಪ್ರಸಾದ್ನನ್ನು ಬಾಳೆಹೊನ್ನೂರು ಪೋಲಿಸರು ಬಂಧಿಸಿದ್ದಾರೆ. ವಸತಿ ಶಾಲೆಯಲ್ಲಿ ಓದುತ್ತಿದ್ದ ಬಾಲಕಿ ಮನೆಗೆ ಬಂದಾಗ, ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಕಾಡಿಗೆ ಕರೆದೊಯ್ದು ದುರ್ಬಳಕೆ ಮಾಡಿದ್ದಾನೆ ಎನ್ನಲಾಗಿದೆ. ಯಾರಿಗಾದರೂ ಹೇಳಿದರೆ ಕೊಲೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ಬಾಲಕಿ ಹೊಟ್ಟೆ ನೋವಾಗಿ ಆಸ್ಪತ್ರೆಗೆ ತೋರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಬಾಳೆಹೊನ್ನೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.