
ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲೊಂದು ದುರ್ಘಟನೆ ಸಂಭವಿಸಿದ್ದು, ಹೊಳೆಗೆ ಹಾರಿ ನರ್ಸ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ರನ್ಯಾ ಬೇಸಿಲ್ (30) ಎಂದು ಗುರುತಿಸಲಾಗಿದ್ದು, ಅವರು ತಾಲೂಕಿನ ಮುತ್ತಿನಕೊಪ್ಪ ಗ್ರಾಮದ ನಿವಾಸಿಯಾಗಿದ್ದು ಶಿವಮೊಗ್ಗದಲ್ಲಿರುವ ನಾರಾಯಣ ಹೃದಯಾಲಯದಲ್ಲಿ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಸಂಜೆ ತಮ್ಮ ಕೆಲಸ ಮುಗಿಸಿ ಮನೆಗೆ ಬಂದ ರನ್ಯಾ ಅವರು ಬಳಿಕ ಮತ್ತೆ ಹೊರಗೆ ತೆರಳಿ ಮುಡುಬ ಸಮೀಪದ ಸೇತುವೆ ಮೇಲಿಂದ ಹೊಳೆಗೆ ಹಾರಿದರೆಂದು ತಿಳಿದು ಬಂದಿದೆ. ಘಟನೆಯ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ, ಈ ಕುರಿತು ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.




