ಕಲಬುರಗಿ: 2019ರಲ್ಲಿ ಕಲಬುರಗಿಯ ಚಿತ್ತಾಪುರದಲ್ಲಿ ಪೋಲೀಸರ ಮೇಲೆ ನಡೆದಿದ್ದ ಹಲ್ಲೆ ಮತ್ತು ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣವನ್ನು ಹಿಂಪಡೆಯುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಕಲಬುರಗಿ ಪೀಠ ತಾತ್ಕಾಲಿಕ ತಡೆ ನೀಡಿದೆ. ಬಕ್ರೀದ್ ಸಂದರ್ಭದಲ್ಲಿ ಗೋವು ಸಾಗಿಸುತ್ತಿದ್ದ ವಾಹನವನ್ನು ಪೋಲೀಸರು ಸೀಜ್ ಮಾಡಿದ್ದರು. ಆದರೆ ವಾಹನ ಬಿಡುವಂತೆ 15ಕ್ಕೂ ಹೆಚ್ಚು ಜನರು ಕರ್ತವ್ಯ ನಿರತ ಪೋಲೀಸ್ ಅಧಿಕಾರಿ ಜೊತೆ ವಾಗ್ವಾದ ನಡೆಸಿ ಬಳಿಕ ಬಸೀರ್ ಗಂಜ್ ಚೌಕ್ ಕಡೆಗೆ ತೆರಳಿ, ಕಲ್ಲು ತೂರಾಟ ನಡೆಸಿದ್ದರು. ಈ ವೇಳೆ ರಸ್ತೆ ಬದಿ ನಿಂತಿದ್ದ ಒಂದು ಕಾರು ಹಾನಿಗೆ ಒಳಗಾದ ಬಗ್ಗೆ ದೂರು ದಾಖಲಾಗಿತ್ತು, ಆದರೆ ಈ ಕೇಸ್ನ ರಾಜ್ಯ ಸರ್ಕಾರ ಸೆಪ್ಟೆಂಬರ್ನಲ್ಲಿ ಹಿಂಪಡೆದಿತ್ತು, ಗಿರೀಶ್ ಭಾರದ್ವಾಜ್ ಅವರು ಈ ಕ್ರಮವನ್ನು ಕೋರ್ಟ್ನಲ್ಲಿ ಪ್ರಶ್ನಿಸಿದ್ದರಿಂದ ನ್ಯಾಯಾಲಯ ಸರ್ಕಾರದ ಆದೇಶಕ್ಕೆ ತಡೆ ನೀಡಿ ಮುಂದಿನ ವಿಚಾರಣೆಯನ್ನು ಡಿಸೆಂಬರ್ 4ಕ್ಕೆ ಮುಂದೂಡಲಾಗಿದೆ.
